ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ. ವಿವಿಧ ಪಕ್ಷಗಳ ನಾಯಕ ಪಕ್ಷಾಂತರವೂ ಆರಂಭವಾಗಿದೆ. ಶಾಸಕ ಸಿ.ಪಿ.ಯೋಗೇಶ್ವರ ಮತ್ತು ಪಿ.ರಾಜೀವ್ ಬಿಜೆಪಿ ಸೇರಲಿದ್ದಾರೆ. ಕರ್ನಾಟಕ ಬಿಜೆಪಿ ನವೆಂಬರ್ 2ರಂದು ಪರಿವರ್ತನಾ ಯಾತ್ರೆಗೆ ಚಾಲನೆ ನೀಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೃಹತ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಂದು ಸಿ.ಪಿ.ಯೋಗೇಶ್ವರ ಮತ್ತು ಪಿ.ರಾಜೀವ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರು ಈಗಾಗಲೇ ಕಾಂಗ್ರೆಸ್ ತೊರೆದಿದ್ದಾರೆ. ಬಿಜೆಪಿ ಸೇರಿ ಅವರು ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣ ಅಥವ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬಿ.ಶ್ರೀರಾಮುಲು ಅವರು ಸ್ಥಾಪನೆ ಮಾಡಿದ್ದ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಕುಡಚಿ ಕ್ಷೇತ್ರದಲ್ಲಿ ಗೆದ್ದು ಬಂದಿದ್ದ ಪಿ.ರಾಜೀವ್ ಬಿಜೆಪಿ ಸೇರಲಿದ್ದಾರೆ. ಶ್ರೀರಾಮುಲು ಅವರು ಬಿಜೆಪಿಗೆ ಮರಳಿ ಬಳ್ಳಾರಿ ಸಂಸದರಾಗಿ ಆಯ್ಕೆಯಾದರೂ ರಾಜೀವ್ ಬಿಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿದ್ದರು. ಈಗ ಚುನಾವಣೆ ಹತ್ತಿರವಾಗುತ್ತಿದ್ದು ಬಿಜೆಪಿ ಸೇರುತ್ತಿದ್ದಾರೆ...