ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ. ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದರಂತೆ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಲು ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿ ಆಹ್ವಾನಿಸಿದೆ.ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 30 ನವೆಂಬರ್ 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸತಕ್ಕದ್ದು.ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕೇಂದ್ರ/ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದಿರುವ ತರಬೇತಿ ಸಂಸ್ಥೆಗಳಿಂದ ಕಂಪ್ಯೂಟರ್ ಬಳಕೆಯಲ್ಲಿ ಕನಿಷ್ಠ 3 ತಿಂಗಳ ತರಬೇತಿ ಪಡೆದಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)