ಖಾಸಗಿ ಸಿಟಿ ಬಸ್- ಕಂಟೈನರ್ ಟ್ರಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆ ಯೊಬ್ಬರು ಮೃತಪಟ್ಟಿದ್ದು , 17 ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನ ನಂತೂರು ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದ್ದು ಘಟನೆಯಲ್ಲಿ ಮೃತಪಟ್ಟವರನ್ನು ಗುರುಪುರ ಕೈಕಂಬದ ಕವಿತಾ (50) ಎಂದು ಗುರುತಿಸಲಾಗಿದೆ. ವೆನ್ ಲಾಕ್ ಸರಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ , ಬಸ್ ನ ಮುಂಭಾಗ ಕುಳಿತಿದ್ದರು ಎನ್ನಲಾಗಿದೆ. ಈ ದುರ್ಘಟನೆ ಸಿ ಸಿ ಟಿ ವಿ ಕ್ಯಾಮೆರಾ ದಲ್ಲಿ ಸೆರೆಯಾಗಿದ್ದು . ಘಟನೆಯಲ್ಲಿ ಗಂಭೀರ ಗಾಯಗೊಂಡ ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಯಿತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಅವರು ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
CCTV footage of a major accident which happened in Mangalore has been found . and it is very disturbing