ಹಾಯ್ ಬೆಂಗಳೂರು ಪತ್ರಿಕೆಯ ಪ್ರಧಾನ ಸಂಪಾದಕ ರವಿ ಬೆಳೆಗೆರೆಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಪದ್ಮನಾಭನಗರದ ಕಚೇರಿಯಲ್ಲಿ ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪತ್ರಕರ್ತರೊಬ್ಬರನ್ನು ಕೊಲ್ಲಲುಶಾರ್ಪ್ ಶೂಟರ್ಸ್ ಗೆ ಸುಪಾರಿ ಕೊಟ್ಟಿದ್ದ ಆರೋಪದ ಮೇಲೆ ರವಿಬೆಳಗೆರೆಯನ್ನು ಬಂಧಿಸಲಾಗಿದೆ. ಶಾರ್ಪ್ ಶೂಟರ್ ಶಶಿಧರ್ ಮುಂಡೇವಾಡಗಿ ಹಾಗೂ ಸಹಚರರು ವಿಚಾರಣೆ ವೇಳೆ ಈ ವಿಷಯ ಬಾಯ್ಬಿಟ್ಟಿದ್ದಾನೆ.ಹಾಯ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರು ಎಂದು ಶಾರ್ಪ್ ಶೂಟರ್ಸ್ ಶಶಿಧರ್ ಹೇಳಿದ್ದ ಎಂದು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ.ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ವೇಳೆ ಬಂಧಿತನಾಗಿದ್ದ ತಾಹೀರ್ ಹುಸೇನ್ ಎಂಬಾತ ನೀಡಿದ್ದ ಮಾಹಿತಿ ಮೇರೆಗೆ ಮತ್ತೊಬ್ಬ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.