ಹೊಸ ವರ್ಷದ ಹಿಂದಿನ ದಿನ ಮತ್ತು ಹೊಸ ವರ್ಷದಂದು ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಿದರೆ ಸರ್ಕಾರಕ್ಕೆ 70 ಕೋಟಿ ನಷ್ಟ ಉಂಟಾಗಲಿದೆ. ಹೊಸ ವರ್ಷದ ಮುನ್ನಾದಿನ ಹಾಗೂ ಹೊಸ ವರ್ಷದ ಮೊದಲ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿದರೆ 80 ಲಕ್ಷ ಲೀಟರ್ ಮದ್ಯ ಮಾರಾಟ ನಿಂತು ಹೋಗಿ ಸುಮಾರು 70 ಕೋಟಿ ನಷ್ಟ ಉಂಟಾಗಲಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಮದ್ಯ ಸೇವನೆ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರುವ ಡಿಸೆಂಬರ್ 31 ಹಾಗೂ 2018 ರ ಜನವರಿ 1 ರಂದು ಬೆಂಗಳೂರು ನಗರದಲ್ಲಿ ಮದ್ಯ ಮಾರಾಟ ನಿರ್ಬಂಧಿಸುವಂತೆ ಸೂಚನೆ ನೀಡಬೇಕು ಎಂದು ಪುರುಷ ರಕ್ಷಣಾ ವೇದಿಕೆ ಕಾರ್ಯಕರ್ತ ನಾಗೇಶ್ ಎಂಬುವವರು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಡಿ.15 ರಂದು ಈ ಕುರಿತು ಆದೇಶ ಹೊರ ಬೀಳುವ ನಿರೀಕ್ಷೆ ಇದೆ.
Will karnataka high court ban selling of alcohol in Brngaluru on 31st desc and jan 1st to avoid eve molestation which happened last year.