¡Sorpréndeme!

ಸೋನಿಯಾ ಗಾಂಧಿ ರಾಜಕೀಯದಿಂದ ನಿವೃತ್ತಿ | Oneindia Kannada

2017-12-15 1,043 Dailymotion

ದಾಖಲೆಯ ಅವಧಿಗೆ ಐತಿಹಾಸಿಕ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ನಾಳೆ ಅಂದರೆ ಡಿಸೆಂಬರ್ 16ರಂದು ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಿರಿ ಹಸ್ತಾಂತರಿಸಲಿದ್ದು ಇದಾದ ಬಳಿಕ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ.1998ರ ಮಾರ್ಚ್ 14ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸೋನಿಯಾ ಗಾಂಧಿ ನಾಳೆ ತಮ್ಮ ಅಧಿಕಾರ ಬಿಟ್ಟುಕೊಡಲಿದ್ದಾರೆ. 131 ವರ್ಷಗಳ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ 19 ವರ್ಷಗಳ ದೀರ್ಘ ಕಾಲ ಅಧ್ಯಕ್ಷರಾಗಿದ್ದ ಸಾಧನೆ ಸೋನಿಯಾ ಗಾಂಧಿಯವರದ್ದು.ಸತತ ಅನಾರೋಗ್ಯಕ್ಕೆ ಒಳಗಾಗುತ್ತಿರುವ 71 ವರ್ಷದ ಸೋನಿಯಾ ಗಾಂಧಿ ತಮ್ಮ ಪುತ್ರನಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಬಿಟ್ಟುಕೊಡಲಿದ್ದಾರೆ. ನಂತರ ಸಕ್ರಿಯ ರಾಜಕೀಯದಿಂದ ದೂರ ಸರಿಯಲಿದ್ದಾರೆ. ಇದರ ಬಗೆಗಿನ ಇನ್ನಷ್ಟು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ