ತ್ರಿವಳಿ ತಲಾಖ್ ಗೆ ಕಾನೂನು ಬಾಹಿರ, ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ, ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಮಸೂದೆಗೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ತ್ರಿವಳಿ ತಲಾಖ್ ಮಾನ್ಯತೆ ರದ್ದು ಮಾಡಿ ಆಗಸ್ಟ್ 27ರಂದು ತೀರ್ಪಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲಿರುವ ಹೊಸ ಕಾಯ್ದೆ ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ. ತ್ರಿವಳಿ ತಲಾಖ್ ಜಾಮೀನು ರಹಿತ ಅಪರಾಧ ಎಂದು ಪರಿಗಣನೆ, ಗರಿಷ್ಠ 3 ವರ್ಷ ಶಿಕ್ಷೆ, ಜಮ್ಮು-ಕಾಶ್ಮೀರಕ್ಕೆ ಅನ್ಯವಿಲ್ಲ, ಲಿಖಿತ, ಮಾತಿನ ಮೂಲಕ ಅಥವಾ ಎಲೆಕ್ಟ್ರಾನಿಕ್ ವಿಧಾನದಲ್ಲಿ ತಲಾಖ್ ನೀಡುವುದು ಮಸೂದೆಯಲ್ಲಿ ತಿಳಿಸಲಾಗಿದೆ.ವಿವಾಹಿತ ಮಹಿಳೆಗೆ ವಿವಾಹ ವಿಚ್ಛೇದನ ನೀಡುವ ಒಂದು ರೀತಿಯ ಪದ್ಧತಿಯಾಗಿದೆ. ಈ ಪದ್ಧತಿಯಂತೆ ವಿವಾಹಿತ ಮುಸ್ಲಿಂ ವ್ಯಕ್ತಿಯು ತನ್ನ ಪತ್ನಿಗೆ ಕಾನೂನು ಮಾನ್ಯ ವಿಚ್ಛೇದನ ನೀದಿದ್ದೇನೆ ಎಂದು ಘೋಷಿಸಬಹುದಾಗಿದೆ.