¡Sorpréndeme!

ಬೆಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ | Oneindia Kannada

2018-01-06 175 Dailymotion

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದು, ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಸಮಾವೇಶ ಉದ್ದೇಶಿಸಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ. ಅದರಂತೆ ರಾಜ್ಯ ಬಿಜೆಪಿ ರಾಜ್ಯಾದ್ಯಂತ ಕೈಗೊಂಡಿರುವ ಪರಿವರ್ತನಾ ಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೇ ಜನವರಿ 7 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರಿಂದ ಬಿಜೆಪಿ ವರದಾನವಾಗಿತ್ತು. ಅದರಂತೆ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ 2ನೇ ಬಾರಿ ಕರ್ನಾಟಕಕ್ಕೆ ಯೋಗಿ ಆಗಮಿಸಲಿದ್ದಾರೆ. ಇದರಿಂದ ಯಾವ ರೀತಿಯಲ್ಲಿ ಬದಲಾವಣೆ ಆಗಬಹುದು ಎಂಬುದನ್ನು ಕಾದು ನೋಡಬೇಕಾಗಿದೆ.
Uttar Pradesh CM Aditya Yoginath is coming to Karnataka on 7th of this month . The same magic which happened in Gujarat is expected to happen here .