¡Sorpréndeme!

ಕರ್ನಾಟಕ ಬಜೆಟ್ 2018 : ಬಜೆಟ್ ಮಂಡಿಸಲು ಸಿದ್ದರಾಮಯ್ಯ ರೆಡಿ | Oneindia Kannada

2018-02-16 12,130 Dailymotion

2018ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಲಿದ್ದಾರೆ. 2018-19ನೇಸಾಲಿನ ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇದೆ. ಎಲ್ಲಾ ವರ್ಗಗಳನ್ನು ಸಂತೃಪ್ತಗೊಳಿಸುವ ಜನಪ್ರಿಯ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 6ನೇ ಬಜೆಟ್‌ ಇದಾಗಿದೆ. ಶುಕ್ರವಾರ 11.30ಕ್ಕೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೊನೆಯ ಕೊನೆಯ ಬಜೆಟ್ ಇದಾಗಿದೆ. ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.