CM Siddaramaiah meets AICC president Rahul Gandhi and discussed about Rajya Sabha seat selection. Siddaramaiah demand Rahul to consider only Kannadigas for the Rajya Sabha seat.
ಕರ್ನಾಟಕದಿಂದ ರಾಜ್ಯಸಭೆಗೆ ಕನ್ನಡೇತರ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ನಿನ್ನೆ (ಮಾರ್ಚ್ 07)ರಂದು ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರು 'ರಾಜ್ಯದಲ್ಲಿ ಚುನಾವಣೆ ಸಮೀಪದಲ್ಲಿದ್ದು, ಈ ಸಮಯದಲ್ಲಿ ಕನ್ನಡೇತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸಿದರೆ ಹಲವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ವಿರೋಧ ಪಕ್ಷದ ಟೀಕೆಗೆ ಆಹಾರವಾಗಬೇಕಾಗುತ್ತದೆ' ಎಂದು ಸಿದ್ದರಾಮಯ್ಯ ಅವರು ರಾಹುಲ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.