Tuesday, being the final day for filing nomination papers to contest the Assembly elections. According to sources, In Devanahalli constituency More than 23 nomination papers have been filed since the window opened on April 17. Nisarga Narayanaswamy filed nomination as JDS candidate.
ದೇವನಹಳ್ಳಿ ಕ್ಷೇತ್ರದಲ್ಲಿ 2018ರ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸುವ ಕೊನೆಯ ದಿನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರನ್ನು ಬದಲಿಸಿ ನಿಸರ್ಗ ನಾರಾಯಣಸ್ವಾಮಿ ಅವರಿಗೆ ಸಿ ಫಾರಂ ನೀಡಿದ್ದಾರೆ. ಈ ಹಿಂದೆ ಜೆಡಿಎಸ್ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಬಿ ಫಾರಂ ನೀಡಿದ್ದರು.