40ವರ್ಷದಿಂದ ಒಂದೇ ಕುಟುಂಬ ಸೊರಬ ಕ್ಷೇತ್ರದಲ್ಲಿ ರಾಜಕಾರಣ ಮಾಡುತ್ತಿದೆ. ಆ ಕುಟುಂಬದಿಂದ ತಾಲೂಕು ಅಭಿವೃದ್ಧಿಯಾಗಿಲ್ಲ. ಈ ಚುನಾವಣೆಯಲ್ಲಿ ಜನರು ಅದಕ್ಕೆ ಉತ್ತರ ಕೊಡುತ್ತಾರೆ ಎಂಬ ಭರವಸೆ ಇದೆ' ಎಂದು ರಾಜು ತಲ್ಲೂರು ಹೇಳಿದರು. ರಾಜು ತಲ್ಲೂರು ಅವರು ಸೊರಬ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಮೊದಲು ಬಿಜೆಪಿಯಲ್ಲಿದ್ದ ರಾಜು ಅವರು, ಕುಮಾರ್ ಬಂಗಾರಪ್ಪ ಅವರು ಪಕ್ಷ ಸೇರಿದ ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.