ಮತ ಚಲಾಯಿಸುವ ಮುನ್ನ ಸಿದ್ದರಾಮನಹುಂಡಿಯ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಗಳು
ಮತ ಚಲಾಯಿಸಲು ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಭರ್ಜರಿಯಾಗಿ ಸ್ವಾಗತ ಕೋರಿದರು. ಮೊದಲು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಯವರು ಬಳಿಕ ಸರ್ಕಾರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.