ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ (ನ 13) ಅಚ್ಚರಿಯೊಂದು ನಡೆದಿದೆ. ಶಿಂಷಾ ನದಿ ದಡದಲ್ಲಿರುವ ಶ್ರೀಪಾದರಾಜರು ಮತ್ತು ಶ್ರೀವ್ಯಾಸರಾಜರು ಪ್ರತಿಷ್ಟಾಪಿಸಿರುವ ಈ ಆಂಜನೇಯಸ್ವಾಮಿ ದೇವಾಲಯಕ್ಕೆ, ಉಡುಪಿ ಅಷ್ಟಮಠಗಳಲ್ಲೊಂದಾದ ಸೋದೆ ಮಠದ ವಿಶ್ವವಲ್ಲಭ ಶ್ರೀಗಳು ಧಾರ್ಮಿಕ ಸಂಚಾರ ಪರ್ಯಟನೆಯ ಭಾಗವಾಗಿ ದೇವಾಲಯಕ್ಕೆ ಆಗಮಿಸಿದ್ದರು.