ಸಿಎಂ ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಮಲ್ಲೇಶ್ವರದ ಇತಿಹಾಸ ಪ್ರಸಿದ್ಧ ಕಾಡು ಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಲ್ಲೇಶ್ವರದಲ್ಲಿ ಇಂದು ಕಡಲೇಕಾಯಿ ಪರಿಶೆ ಇದ್ದು, ಕಾರ್ತಿಕ ಸೋಮವಾರವಾದ ಇಂದು ಕಾಡು ಮಲ್ಲೇಶ್ವರ ಸ್ವಾಮಿ ದೇವರ ವಿಶೇಷ ಪೂಜೆ ಇತ್ತು. ಹಾಗಾಗಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದರು.