Speculations of Malayalam superstar Mohanlal joining politics have been put to rest, after he clarified that he had no intention to contest elections or join politics. Politics is not my cup of tea. I want to remain an actor always. I enjoy the freedom I have in this profession.
ಕೇರಳದಲ್ಲಿ ಬಿಜೆಪಿ ತನ್ನ ವ್ಯಾಪ್ತಿ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ್ದಂತೆ ಯತ್ನಿಸುತ್ತಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ದ ಹಿರಿ ತಲೆಗಳಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೆಲೆಬ್ರಿಟಿಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಲಾಲ್ ಅವರ ಅಭಿಮಾನಿಗಳು, ಆಕ್ರೋಶ ವ್ಯಕ್ತಪಡಿಸಿದ ಬಳಿಕ ಈ ಕುರಿತಂತೆ ಸ್ವತಃ ಮೋಹನ್ ಲಾಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.