¡Sorpréndeme!

ಮತ್ತೆ ಮುಖ್ಯಮಂತ್ರಿಯಾಗುವ ಬಗ್ಗೆ ಸಿದ್ದರಾಮಯ್ಯ ನೀಡಿದ ಪ್ರತಿಕ್ರಿಯೆ | Oneindia Kannada

2019-05-08 197 Dailymotion

Former chief minister of Karnataka Siddaramaiah keeps silence while asking about, his close associates' demand for him to become CM again.


ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್ ನ ಅತೃಪ್ತ ಶಾಸಕರು ದಿನೇ ದಿನೇ ಹೇಳಿಕೆ ನೀಡುತ್ತಿರುವುದು ಮೈತ್ರಿ ಸರ್ಕಾರಕ್ಕೆ ಇರಿಸುಮುರಿಸುಂಟು ಮಾಡಿದೆ. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಶಾಸಕರನ್ನು ಕಡೆಗಣಿಸಲಾಗಿದೆ ಎಂಬ ದೂರು ಕೇಳಿಬರುತ್ತಿರುವುದು ಹೊಸ ವಿಷಯವಲ್ಲ. ಆದರೆ ಈಗ ಮತ್ತೆ 'ಮುಖ್ಯಮಂತ್ರಿ ಬದಲಾಗಲಿ', 'ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿ' ಎಂಬ ಮಾತುಗಳು ಕೇಳಿಬರುತ್ತಿದ್ದು, ಅದಕ್ಕೆ ಸಿದ್ದರಾಮಯ್ಯ ಹೇಗೆ ಪ್ರತಿಕ್ರಿಯಿಸಬೇಕೋ ತಿಳಿಯದೆ ಇಕ್ಕಟ್ಟಿಗೆ ಸಿಲುಕಿದ್ದಾರೆ.