Duniya Vijay ready to direct another Kannada movie. He wrote script already. He said some producers approached him to make movie
ತಮ್ಮ ಮುಂದಿನ ಸಿನಿಮಾಕ್ಕೆ ಈಗಾಗಲೇ ಕತೆ ಮಾಡಿಟ್ಟುಕೊಂಡಿದ್ದಾರಂತೆ ವಿಜಿ, ''ದುನಿಯಾ ವಿಜಯ್ ಸಿನಿಮಾ ಮಾಡುತ್ತಾರೆ ಎಂದರೆ ಅದೇ ರೌಡಿಸಂ ಕತೆ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಸ್ವಲ್ಪ ಬೇರೆಯದ್ದೇ ರೀತಿಯ ಕತೆ ಹೇಳಲಿದ್ದೇನೆ. ಮನೊರಂಜನೆ ಜೊತೆಗೆ ಸಮಾಜಕ್ಕೆ ಹತ್ತಿರವಾದ ಕತೆಯನ್ನು ಹೇಳಲಿದ್ದೇನೆ. ಈ ಬಾರಿಯ ಕತೆ 'ಸಲಗ'ಕ್ಕಿಂತಲೂ ಬಲವಾಗಿದೆ'' ಎಂದಿದ್ದಾರೆ. ತಮ್ಮ ನಿರ್ದೇಶನದ ಸಿನಿಮಾಕ್ಕೆ ಹಣ ಹೂಡಲು ನಿರ್ಮಾಪಕರು ಸಿದ್ಧವಾಗಿದ್ದಾರೆ ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ ವಿಜಿ