ಬೆಂಗಳೂರು ಅಷ್ಟೇ ಅಲ್ಲ ಬೆಳಗಾವಿ ಜಿಲ್ಲೆಯಾದ್ಯಂತ ನಾಯಿಗಳ ಹಾವಳಿ ಮೀತಿಮಿರಿದೆ. ಎಲ್ಲೆಂದರಲ್ಲಿ ಮಕ್ಕಳು, ಮಹಿಳೆಯರು, ವೃದ್ಧರ ಮೇಲೆ ನಾಯಿಗಳು ದಾಳಿ ನಡೆಸ್ತಿವೆ. ರಾತ್ರಿಯಾದ್ರೇ ಸಾಕು ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಕೇವಲ 6 ತಿಂಗಳ ಅವಧಿಯಲ್ಲಿ ಬರೋಬ್ಬರಿ 14,278 ಜನರಿಗೆ ನಾಯಿಗಳು ಕಚ್ಚಿದ್ದು ಎಲ್ಲರೂ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ. ನಗರ ಪ್ರದೇಶದಲ್ಲೂ ನಾಯಿಗಳ ಹಾವಳಿ ಮೀತಿಮಿರಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಶಾಸಕ ಅಭಯ್ ಪಾಟೀಲ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಡಿಎಚ್‍ಒ ಡಾ.ಮಹೇಶ್ ಕೋಣಿ ಪ್ರತಿಕ್ರಿಯಿಸಿ, ಈ ವರ್ಷ ಆರು ತಿಂಗಳಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ನಾಯಿಗಳು ಜನರಿಗೆ ಕಚ್ಚಿವೆ. ಈಗಾಗಲೇ ಈ ಕುರಿತು ಇಲಾಖೆ ಸಭೆಯಲ್ಲಿ ಪ್ರಸ್ತಾವನೆ ಕೂಡ ಆಗಿದೆ. ನಾಯಿ ಕಡಿತಕ್ಕೆ ಲಸಿಕೆ ಇದ್ದು ಯಾವ ತೊಂದರೆ ಇಲ್ಲ ಎಂದಿದ್ದಾರೆ.
#publictv #hrranganath #newscafe