¡Sorpréndeme!

ಇದೇ ಮೊದಲ ಬಾರಿಗೆ ಮೈದುಂಬಿದ ಯರಗೋಳ್ ಡ್ಯಾಂ | Yaragol Dam | Kolar | Public TV

2022-08-08 4 Dailymotion

ಕೋಲಾರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬಂಗಾರಪೇಟೆ ತಾಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಡ್ಯಾಂ ತುಂಬಿ ಹರಿಯುತ್ತಿದೆ. ಹೊಸದಾಗಿ ನಿರ್ಮಾಣ ಮಾಡಿರುವ ಈ ಡ್ಯಾಂ ನಿರ್ಮಾಣವಾದ ನಂತರ ಇದೇ ಮೊದಲ ಬಾರಿಗೆ ತುಂಬಿ ಹರಿಯುತ್ತಿದೆ. ಸ್ವತಂತ್ರ್ಯ ಬಂದ ನಂತರ ಕೋಲಾರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಮೊದಲ ಡ್ಯಾಂ ಎಂಬ ಹೆಗ್ಗಳಿಕೆ ಹೊಂದಿರುವ ಈ ಜಲಾಶಯ ಮೂರು ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುತ್ತೆ.. ಡ್ಯಾಂ ತುಂಬಿ ಹರಿಯುತ್ತಿರುವ ಹಿನ್ನೆಲೆ ಯರಗೋಳ್ ಡ್ಯಾಂ ಪ್ರವಾಸಿತಾಣವಾಗಿ ಮಾರ್ಪಟ್ಟಿದೆ. ನಿತ್ಯ ನೂರಾರು ಜನರು ಆಗಮಿಸಿ ಜಲಾಶಯವ ವೈಭವವನ್ನು ಕಣ್ತುಂಬಿಕೊಳ್ತಿದ್ದಾರೆ.

#publictv #kolar