ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ನಡೀತಾ ಇದೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಹತ್ಯೆಗೆ ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ ಕಬೀರ್ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
=======
ಮೊಹರಂ ಹಬ್ಬದ ಮೆರವಣಿಗೆಯಲ್ಲಿ ಗಲಾಟೆ ನಡೆದ ಘಟನೆ ಗದಗ ತಾಲೂಕಿನ ಮಲ್ಲಸಮುದ್ರದಲ್ಲಿ ನಡೆದಿದೆ. ಸೋಮೇಶ್ ಗುಡಿ ಎಂಬಾತ ಇಬ್ಬರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ತೌಸಿಫ್, ಮುಷ್ತಾಕ್ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೌಸಿಫ್ ಎಂಬಾತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
#publictv #praveennettaru #gadaga