ದಾವಣಗೆರೆ: ಹರಿಹರದಿಂದ ದಾವಣಗೆರೆ ವಿವಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿ, ಅದೇ ಬಸ್ಸಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಚರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ವಿದ್ಯಾರ್ಥಿಗಳ ಸಮಸ್ಯೆಗಳನ್ನೂ ಆಲಿಸಿದರು.
ಜಿಲ್ಲೆಯ ಹರಿಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ದಾವಣಗೆರೆ ವಿವಿಗೆ ತೆರಳಲು ಬಸ್ ವ್ಯವಸ್ಥೆ ಇರಲಿಲ್ಲ. ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹರಿಹರದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ್ದಾರೆ.
ಹರಿಹರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರ ವ್ಯವಸ್ಥೆಗೆ ಚಾಲನೆ ನೀಡಿದ ಅವರು ಅದೇ ಬಸ್ಸಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂಚಾರ ಮಾಡಿದರು. ಹರಿಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ತೆರಳುವ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ಹರಿಹರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಬೆಳಗ್ಗೆ ನಾಲ್ಕು ಬಸ್ಗಳು ದಾವಣಗೆರೆ ವಿವಿಗೆ ತೆರಳಲಿದ್ದು, ಮೊದಲ ಬಸ್ 8.30ಕ್ಕೆ, ಎರಡನೇ ಬಸ್ 8.45ಕ್ಕೆ, ಮೂರನೇ ಬಸ್ 9ಕ್ಕೆ ಹಾಗೂ ನಾಲ್ಕನೇ ಬಸ್ 9.15 ಕ್ಕೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ತೆರಳಲಿದೆ. ಅಲ್ಲದೆ ಪ್ರತಿನಿತ್ಯ ಸಂಜೆ 5, 5.15, 5.30 ಹಾಗೂ 5.45ಕ್ಕೆ ದಾವಣಗೆರೆ ವಿವಿಯಿಂದ ಹರಿಹರಕ್ಕೆ ಬಸ್ಗಳು ಆಗಮಿಸಲಿವೆ ಎಂದು ಸಂಸದೆ ಮಾಹಿತಿ ನೀಡಿದ್ದಾರೆ.
ಇದನ್ನೂ ನೋಡಿ: ಪಿಎಂ ಇ-ಡ್ರೈವ್; ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ